ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೆ.ಪಿ.ಭವನದಲ್ಲಿ ರಾಷ್ಟ್ರೀಯ ಪರಿಷತ್ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಾಗೂ ೨೫ ವರ್ಷಗಳ ಬೆಳ್ಳಿ ರಜತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಾತ್ಯಾತೀತ ಜನತಾದಳದ ನೂತನವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಹೆಚ್.ಡಿ.ದೇವೇಗೌಡರವರಿಗೆ ಅಲೆಮಾರಿ ಸಮುದಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಡೆಗಣಿಸಿದ್ದಾರೆ.

ಅಲೆಮಾರಿ ಸಮುದಾಯಗಳಿಗೆ ಇರುವ ಸವಲತ್ತುಗಳನ್ನು ಕಸಿದುಕೊಂಡಿದ್ದಾರೆಂದು ಪ್ರಸ್ತಾಪಿಸಿದಾಗ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಬೇಸರ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಅಲೆಮಾರಿ ಸಮುದಾಯಗಳ ಪರವಾಗಿ ಧ್ವನಿ ಎತ್ತುತ್ತೇನೆಂದು ಪ್ರತಾಪ್‌ಜೋಗಿ ರವರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಉಕ್ಕು ಮತ್ತು ಬಾರೀ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿರವರನ್ನು ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ, ಯಶೋಧರ್, ಗೋಪಾಲಸ್ವಾಮಿ ನಾಯಕ್ ವಕ್ತಾರು, ಚಿದಾನಂದ, ರಮೇಶ್, ಅಬ್ದುಲ್.ಎಸ್.ಸಿ (ಅಬು), ಪ್ರತಾಪ್‌ಜೋಗಿ, ತಿಮ್ಮಣ್ಣ ಮತ್ತಿತರರು ಅಭಿನಂದಿಸಿದರು.

