ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹುತಾತ್ಮ ದಿನದ ಅಂಗವಾಗಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಬೋಧಿಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಈಶ್ವರ ಖಂಡ್ರೆ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಎಸ್.ಪೊನ್ನಣ್ಣ, ಶಾಸಕ ಶಿವಲಿಂಗೇಗೌಡರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಚಿವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.