ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಪೂರ್ಣಾವಧಿಗೆ ಅಧಿಕಾರ ಮಾಡಲ್ಲ, ಮುಖ್ಯಮಂತ್ರಿಯಾಗಿ ಇರಲ್ಲ. ಸಿದ್ದರಾಮಯ್ಯ ಅವರು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದ್ದಾರೆ.
ಸುತ್ತೂರು ಮಠಕ್ಕೆ ಶುಕ್ರವಾರ ಭೇಟಿ ನೀಡಿದ ನಂತರ ಅವರು ಮಾಧ್ಯಮದರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್‌ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗಬಾರದು ಎನ್ನುವ ಉದ್ದೇಶ ಇಟ್ಟುಕೊಂಡಿದ್ದು ಪ್ರತಿನಿತ್ಯ ಸಿದ್ದರಾಮಯ್ಯ ಅವರು ತಮ್ಮ ಆತ್ಮೀಯರ ಮೂಲಕ ರಾಜಕೀಯ ದಾಳ ಉರುಳಿಸುತ್ತಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಸಿದ್ದರಾಮಯ್ಯ ರಾಜಕೀಯ ಚಾಣಕ್ಯ. ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು, ಶಾಸಕರ ಮೂಲಕ ಡಿನ್ನರ್‌ಮೀಟಿಂಗ್‌ಮಾಡಿ ಡಿ.ಕೆ.ಶಿವಕುಮಾರ್‌ವಿರುದ್ಧ ಹೇಳಿಕೆ ಕೊಡಿಸುತ್ತಿದ್ದಾರೆ. ಆದ್ದರಿಂದಲೇ ತಮ್ಮ ಅವಧಿ ಮುಗಿಯುತ್ತಿದ್ದಂತೆ ಕುತಂತ್ರಗಳ ಮೂಲಕ ಡಿಕೆಶಿ ವಿರುದ್ಧ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ಅಧಿಕಾರಕ್ಕೆ ಬರಲು ನನ್ನದು ಸಿಂಹಪಾಲು ಎಂದು ಡಿ. ಕೆ ಶಿವಕುಮಾರ್‌ಅವರು ಮುಖ್ಯಮಂತ್ರಿಯಾಗಲು ಕನಸು ಕಾಣುತ್ತಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.
ಜಾತಿ ಗಣತಿ ಅವೈಜ್ಞಾನಿಕ: ಜಾತಿ ಗಣತಿ ವರದಿ ಅತ್ಯಂತ ಅವೈಜ್ಞಾನಿಕವಾಗಿದೆ. ಅಷ್ಟೇ ಅಲ್ಲ ಜಾತಿಗಣತಿಯನ್ನ ಸಿದ್ದರಾಮಯ್ಯ ಅವರು ಪಗಡೆಯಾಟ ಅಂದುಕೊಂಡು, ರಾಜಕೀಯ ದಾಳವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ಕುರ್ಚಿ ಅಲುಗಾಡುವಾಗ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ನೆನಪಿಗೆ ಬರುತ್ತದೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.
ಕಳೆದ ಹತ್ತು ವರ್ಷಗಳಿಂದೆ ಮಾಡಿರುವ ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ. ಈಗಾಗಲೇ ಜಾತಿ ಗಣತಿ ವರದಿ ಸೋರಿಕೆಯಾಗಿದೆ. ಲಿಂಗಾಯಿತ ಹಾಗೂ ಒಕ್ಕಲಿಗ ಸಮುದಾಯಗಳ ಬಲವಾಗಿ ವಿರೋಧಿಸುತ್ತಿವೆ. ಅವಕಾಶ ವಂಚಿತ ಬೇರೆ ಜಾತಿಯವರಿಗೆ ನ್ಯಾಯ ಕೊಡಲು ಸಂಪೂರ್ಣ ಬೆಂಬಲವಿದೆ. ಆದರೆ ಜಾತಿಗಣತಿ ಹೆಸರಲ್ಲಿ ಸಿದ್ದರಾಮಯ್ಯ ಅವರು ರಾಜಕೀಯ ಮಾಡಬಾರದು ಎಂದು ವಿಜಯೇಂದ್ರ ಆಗ್ರಹ ಮಾಡಿದರು.
ಆಡಳಿತ ವೈಫಲ್ಯ:
ಬೀದರ್‌ನಲ್ಲಿ ಹಾಡು ಹಗಲೇ ಶೂಟ್ ಮಾಡಿ ಹಣ ದರೋಡೆ ಮಾಡಲಾಗಿದೆ. ಪ್ರತಿನಿತ್ಯ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಗುತ್ತಿಗೆದಾರರ ಆತ್ಮಹತ್ಯೆ, ಬಾಲಕಿಯ ಮೇಲೆ ಅತ್ಯಾಚಾರ, ಹಸುವಿನ ಕೆಚ್ಚಲು ಕೊಯ್ದ ಘಟನೆ ಸೇರಿದಂತೆ ಹಲವು ಘಟನೆಗಳು ಜರುಗಿದ್ದರೂ ರಾಜ್ಯ ಸರ್ಕಾರ ಏನು ನಡದೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದೆ.
ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿರುವ ಒಬ್ಬ ಕಾಂಗ್ರೆಸ್ಸಿಗರನ್ನು ಬಂಧಿಸಿಲ್ಲ. ಆರೋಪಿಗಳಿಗೆ ರಕ್ಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವೈಫಲ್ಯ ಎದ್ದು ಕಾಣುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಿಜಯೇಂದ್ರ ಹರಿಹಾಯ್ದರು.

