ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು.
ಹೋರಾಟಕ್ಕೆ ವಿರೋಧವಿಲ್ಲ:
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.