ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು-ಹೆಚ್.ಡಿ.ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ಮಾಡಿದ್ದಾರೆ.

ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!
ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!

Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು.

ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ.

ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆsss!! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

- Advertisement -  - Advertisement - 
Share This Article
error: Content is protected !!
";