ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.23 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಜಕ್ಕೂರು ಏರೋಡ್ರೋಂ ನಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸುವ ಅವರು, ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ
ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ಗೆ ಆಗಮಿಸುವರು.
ವಾಣಿ ವಿಲಾಸ ಸಾಗರ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

