ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನ ಉಚ್ಛಾಟನೆ ಮಾಡೋ ಧಮ್ ಇದೆಯಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ
? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತನಾ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ ಎಂದು ಅಶೋಕ್ ಸವಾಲ್ ಹಾಕಿದ್ದಾರೆ.

ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನ ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಕರ್ನಾಟಕದ ಬಿಜೆಪಿ ಪಕ್ಷದವರು ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ಇದೆ ತಮಗೆ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

 

Share This Article
error: Content is protected !!
";