ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ಟೀಕಾಪ್ರಹಾರ ಮಾಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಕಳೆದ ಎರಡುವರೆ ವರ್ಷಗಳಲ್ಲಿ ಮಾಡಿರುವ ಸಾಲ ಎಲ್ಲಿ ಉಪಯೋಗವಾಯಿತು?. ಹೊಸ ಮೆಟ್ರೋ, ಫ್ಲೈ ಓವರ್ ಅಥವಾ ಕಟ್ಟಡಗಳನ್ನು ನಿರ್ಮಿಸಲಾಗಿದೆಯೇ ಎಂದು ಅವರು ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.
ಬಂಡವಾಳ ವೆಚ್ಚ ಕಡಿಮೆ ಮಾಡಿ, ಆದಾಯ ವೆಚ್ಚ ಮತ್ತು ಸಬ್ಸಿಡಿಗಳನ್ನು ಹೆಚ್ಚಿಸುವ ಮೂಲಕ ಪ್ರಪಂಚದ ಯಾವುದೇ ಸರ್ಕಾರ ಯಶಸ್ವಿಯಾಗಿಲ್ಲ.
ರಾಜ್ಯದ ಬಂಡವಾಳ ವೆಚ್ಚ 57-58 ಸಾವಿರ ಕೋಟಿ ರೂಪಾಯಿಗಳಿಂದ 49-50 ಸಾವಿರ ಕೋಟಿ ರೂ.ಗಳಿಗೆ ಇಳಿದಿದೆ. ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತಪತ್ರ ಹೊರಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ.
ಸಿದ್ದರಾಮಯ್ಯನವರ ಆಡಳಿತ ರಾಜ್ಯಕ್ಕೆ ಹಿಡಿದ ಗ್ರಹಣವಾಗಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿ ವಾಗ್ದಾಳಿ ಮಾಡಿದ್ದಾರೆ.

