ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಜಂಟಿ ಜಯಂತ್ಯೋತ್ಸವದ ಅಂಗವಾಗಿ ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ, ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಿ. ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರ , ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಹಾಗೂ ಸಿದ್ದಗಂಗಾ ಆಸ್ಪತ್ರೆ ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಸೋಮವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು.
ಹಿರೇಮಠದ ಅಧ್ಯಕ್ಷ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಶಿಬಿರಕ್ಕೆ ಚಾಲನೆ ನಿಡಿದರು. ವೀರಶೈವ ಸಮಾಜದ ಅಧ್ಯಕ್ಷ ಎಸ್.ಜಿ. ಚಂದ್ರಮೌಳಿ , ಟಿವಿಸಿ ಬ್ಯಾಂಕಿನ ಅಧ್ಯಕ್ಷ ಕೆ.ಜೆ.ರುದ್ರಪ್ಪ, ಉಪಾಧ್ಯಕ್ಷ ಕೆ.ಮಲ್ಲಿಕಾರ್ಜುನಯ್ಯ, ಉಚಿತ ವೈದ್ಯಕೀಯ ಸೇವಾ ಕೇಂದ್ರ ದ ಅಧ್ಯಕ್ಷರಾದ ಅರ್ಜುನ್,
ಜಿಲ್ಲಾ ಶಸ್ತ್ರ ಚಿಕಿತ್ಸಕ ಅಸ್ಕರ್ ಬೇಗ್, ಮಾಜಿ ಸಚಿವ ಎಸ್.ಶಿವಣ್ಣ, ಬಾವಿಕಟ್ಟೆ ಮಂಜಣ್ಣ, ಕೋರಿ ಮಂಜಣ್ಣ, ಟಿ.ಜೆ.ಗಿರೀಶ್, ರವಿಶಂಕರ್, ವೀರಶೈವ ಸಮಾಜದ ಹಾಗೂ ಎಲ್ಲಾ ಅಂಗ ಸಂಸ್ಥೆಯ ಪದಾಧಿಕಾರಿಗಳು ನಿರ್ದೇಶಕರು ಹಾಗೂ ಇತರರು ಭಾಗವಹಿಸಿದ್ದರು.