ರೈತರಿಗೆ ಸಹಿ ಸುದ್ದಿ, ಎಲ್ಲ ಉತ್ಪನ್ನಗಳು ಬೆಂಬಲ ಬೆಲೆಯಲ್ಲಿ ಖರೀದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಣ್ ಅವರು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ (MSP) ಕೇಂದ್ರ ಖರೀದಿಸಲಿದೆ ಎಂದು ಘೋಷಿಸಿದ್ದಾರೆ.

ಯುಪಿಎ ಅವಧಿಯಲ್ಲಿ ರೈತರನ್ನು ಗೌರವಿಸಿರಲಿಲ್ಲ ಮತ್ತು ಲಾಭದಾಯಕ ಬೆಲೆಗಳ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಎಂ. ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಸಮೇತ ಹೇಳಿದ್ದರು. ಎಂ. ಎಸ್. ಸ್ವಾಮಿನಾಥನ್ ಆಯೋಗದ ವರದಿಯನ್ನು ಅನುಷ್ಠಾನ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಎಂದು ಬಿಜೆಪಿ ತಿಳಿಸಿದೆ.

ಕಳೆದ ಮೂರು ವರ್ಷಗಳಿಂದ ಭತ್ತ, ಗೋಧಿ, ಜೋಳ ಮತ್ತು ಸೋಯಾಬೀನ್ ಅನ್ನು ಉತ್ಪಾದನಾ ವೆಚ್ಚಕ್ಕಿಂತ 50 ಪ್ರತಿಶತದಷ್ಟು ಹೆಚ್ಚು ಖರೀದಿಸಲಾಗಿದೆ. 2019 ರಿಂದ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಶೇಕಡಾ 50 ರಷ್ಟು ಲಾಭವನ್ನು ನೀಡುವ ಮೂಲಕ ಕನಿಷ್ಠ ಬೆಂಬಲ ಬೆಲೆಯನ್ನು ನೀಡಲು ಪ್ರಧಾನಿ ಮೋದಿ ಸರ್ಕಾರವು ಸಮ್ಮತಿಸಿದೆ‌.

ಮೋದಿ ಸರ್ಕಾರದಲ್ಲಿ ಎಲ್ಲ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಾಗುತ್ತಲೇ ಇದೆ. ದೇಶದ ರೈತನ ಮನೋಬಲ ಇದರಿಂದ ಹೆಚ್ಚಾಗಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

 

 

- Advertisement -  - Advertisement - 
Share This Article
error: Content is protected !!
";