ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಉಲ್ಲೇಖಿಸಿದ್ದಾರೆ. ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಜಂಟಿಸಮೀಕ್ಷೆಯು ಪೂರ್ಣಗೊಳ್ಳಲಿದೆ.
ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿರುವ ಕಾರಣ, ರಸ್ತೆಗಳು ಹಾಳಾಗಿರುವುದು ನಿಜ. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಭೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸ ರಸ್ತೆಗಳು ನಿರ್ಮಾಣ ಆಗಿರಲಿಲ್ಲ, ಗುಂಡಿಗಳನ್ನೂ ಮುಚ್ಚಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

