ಚಂದ್ರವಳ್ಳಿ ನ್ಯೂಸ್, ಹರಪ್ಪನಹಳ್ಳಿ:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ ಅವರ ನಿರ್ದೇಶನದ ಮೇರೆಗೆ ಕಾಂಗ್ರೆಸ್ ಭವನ ಟ್ರಸ್ಟ್‌ನಿರ್ಮಾಣಕ್ಕಾಗಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದ, ಉಪ ನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ ನಿವೇಶನದ ನೋಂದಾವಣೆ ಮಾಡಲಾಯಿತು.
ಕಾಂಗ್ರೆಸ್ ಭವನ ಟ್ರಸ್ಟಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್, ಕಾಂಗ್ರೆಸ್ ಭವನ ಟ್ರಸ್ಟ್ ಕಾರ್ಯದರ್ಶಿ ಎಲ್. ನಾರಾಯಣ್, ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲತಾ ಮಲ್ಲಿಕಾರ್ಜುನ, ವಿಜಯನಗರ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಕೆಪಿಸಿಸಿ ಸದಸ್ಯರಾದ ಶ್ರೀನಿವಾಸ,
ಜಿಲ್ಲಾ ಉಪಾಧ್ಯಕ್ಷ ಕೆ.ಎಂ ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ ಅಂಜಿನಪ್ಪ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರ ಗೌಡ, ಪುರಸಭೆ ಅಧ್ಯಕ್ಷೆ ಫಾತೀಮಾ ಬೀ ಶೆಕ್ಷಾವಲಿ, ವಿಜಯನಗರ ಜಿಲ್ಲಾ ಉಪಾಧ್ಯಕ್ಷ ಕೆ. ರಮೆಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.