ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಕುಮಾರ್ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ತಾಲ್ಲೂಕಿನ ಮಾಡನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ ಐದು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಆರ್.ಶಿವಕುಮಾರ್
, ಉಪಾಧ್ಯಕ್ಷರಾಗಿ ರಾಜಶೇಖರ್ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಎನ್.ಆರ್.ತಿಪ್ಪೇಸ್ವಾಮಿ, ಜಿ.ಸಿ.ಶ್ರೀಧರ, ಸುಧಾಕರ ಕೆ.ಟಿ, ಚನ್ನಬಸಪ್ಪ, ಜಿ.ಟಿ.ಸತೀಶ್ ಸರ್ವೆಗಾರ, ಕೆ.ಎಂ.ಸೋಮಶೇಖರ್, ತಿಪ್ಪೇಸ್ವಾಮಿ, ಎನ್.ಎಂ.ತಿಪ್ಪೇಸ್ವಾಮಿ, ರಂಗಮ್ಮ, ಶಶಿಕಲಾ ಇವರುಗಳು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";