ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಜಾನಪದ ಪ್ರದರ್ಶಕ ಕಲೆಗಳ ಕುರಿತು ಸಂಶೋಧನಾ ಅಧ್ಯಯನ ನಡೆಸಿ ಮಹಾಪ್ರಬಂಧ ಮಂಡಿಸಿದ ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಡಿ.ಲಿಟ್ ಪದವಿ ಪ್ರದಾನ ಮಾಡಿದೆ.

ಜಾನಪದ ಪ್ರದರ್ಶಕ ಕಲೆಗಳ ರೂಪಾಂತರದ ಮೇಲೆ ಡಿಜಿಟಲ್ ಮಾಧ್ಯಮದ ಪ್ರಭಾವ: ಬಹು ಆಯಾಮದ ವಿಶ್ಲೇಷಣೆಕುರಿತು ಶಿವಕುಮಾರ ಕಣಸೋಗಿ ಅವರು ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಸಂಗೀತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ ಬೆಟ್ಟಕೊಪ್ಪ ಅವರು ಡಿ.ಲಿಟ್ ಪದವಿ ಘೋಷಣೆ ಮಾಡಿ, ಪ್ರಮಾಣಪತ್ರ ಪ್ರದಾನ ಮಾಡಿದರು.

 

 

Share This Article
error: Content is protected !!
";