ಶಿವರಾತ್ರಿ ಪ್ರಯುಕ್ತ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಬಹುತೇಕ ದೇವಾಲಯಗಳಲ್ಲಿ ಬುಧವಾರ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಕೆಳಗೋಟೆಯಲ್ಲಿರುವ ಬೇಡರ ಕಣ್ಣಪ್ಪ ದೇವಸ್ಥಾನದಲ್ಲಿ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಹಾಗೂ ಹೂವುಗಳಿಂದ ಅಲಂಕರಿಸಿ ಪೂಜಿಸಲಾಯಿತು.

ಕೋಟೆ ರಸ್ತೆ, ಆನೆ ಬಾಗಿಲು ಸಮೀಪವಿರುವ ಪಾತಾಳೇಶ್ವರ ದೇವಾಲಯದಲ್ಲಿ ಶಿವನನ್ನು ಸಿಂಗರಿಸಿ ಬೆಳಗಿನಿಂದ ರಾತ್ರಿಯಿಡಿ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು.

- Advertisement - 

ಗಾರೆ ಬಾಗಿಲು ಈಶ್ವರ ದೇವಸ್ಥಾನ, ಉಚ್ಚಂಗಿಯಲ್ಲಮ್ಮ, ಹೊಳಲ್ಕೆರೆ ರಸ್ತೆಯಲ್ಲಿರುವ ನೀಲಕಂಠೇಶ್ವರ ದೇವಸ್ಥಾನದಲ್ಲಿ ವರ್ಣರಂಜಿತವಾಗಿ ಅಲಂಕರಿಸಿ ಪೂಜಿಸಲಾಯಿತು.

ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೆ ಗಾಯತ್ರಿ ಭವನ್ ಸರ್ಕಲ್‌ನಿಂದ ಹಿಡಿದು ದೇವಸ್ಥಾನದವರೆಗೆ ಸಹಸ್ರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ನೀಲಕಂಠೇಶ್ವರ ಸ್ವಾಮಿಯ ದರ್ಶನ ಪಡೆದರು.

- Advertisement - 

ಸಂಜೆ ಏಳು ಗಂಟೆಯಿಂದ ಎಲ್ಲಾ ದೇವಸ್ಥಾನಗಳಲ್ಲಿಯೂ ಭಕ್ತರು ತುಂಬಿ ತುಳುಕಾಡುತ್ತಿದ್ದು, ಶಿವನಿಗೆ ಭಕ್ತಿ ಸಮರ್ಪಿಸಿದರು. ಕೆಲವು ದೇವಾಲಯಗಳಲ್ಲಿ ಭಜನೆ ಏರ್ಪಡಿಸಲಾಗಿತ್ತು. ಅಲ್ಲಲ್ಲಿ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಗಾಂಧಿ ವೃತ್ತದ ನಾಲ್ಕು ಕಡೆ ಹೂವು ಹಣ್ಣುಗಳ ವ್ಯಾಪಾರದಿಂದ ಸಂಚಾರ ದಟ್ಟಣೆಯಿಂದ ಕೂಡಿ ವಾಹನಗಳು ಹಾಗೂ ಪಾದಚಾರಿಗಳ ಓಡಾಟಕ್ಕೆ ಕಷ್ಟವಾಗಿತ್ತು,

ಸಂತೆಹೊಂಡದ ರಸ್ತೆ ಒಂದು ಬದಿಯಲ್ಲಿ ಹಣ್ಣು, ಹೂವು. ಕಬ್ಬು ಮಾರಾಟ ಹಾಗೂ ಮತ್ತೊಂದು ಬದಿಯಲ್ಲಿ ತರಕಾರಿ ಮಾರುಕಟ್ಟೆಯಿರುವುದರಿಂದ ದ್ವಿಚಕ್ರ ವಾಹನ ಸವಾರರು ಕಸರತ್ತು ಮಾಡುವಂತಾಗಿತ್ತು. ಮೊದಲೆ ಕಿಷ್ಕಿಂದೆಯಾಗಿರುವ ಈ ರಸ್ತೆಯಲ್ಲಿ ಬಸ್, ಆಟೋ, ಪಾದಚಾರಿಗಳು ಸಂಚರಿಸಬೇಕಾಗಿರುವುದರಿಂದ ಸಂಚಾರಿ ಪೊಲೀಸರು ಟ್ರಾಫಕ್ ಕಂಟ್ರೋಲ್ ಮಾಡುವಲ್ಲಿ ಹೈರಾಣಾಗಿದ್ದರು.

 

Share This Article
error: Content is protected !!
";