8, 9 ಹಾಗೂ 10ನೇ ತರಗತಿ ಮಕ್ಕಳಿಗೆ ಸ್ಕಿಲ್ ಅಟ್ ಸ್ಕೂಲ್ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
8, 9
ಹಾಗೂ 10ನೇ ತರಗತಿ ಮಕ್ಕಳಿಗೆ ಸ್ಕಿಲ್ ಅಟ್ ಸ್ಕೂಲ್ ಕಾರ್ಯಕ್ರಮವನ್ನು ಹೊಸದಾಗಿ ಅನುಷ್ಠಾನ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement - 

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಮಾತನಾಡಿದ ಅವರು, 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ ಸ್ಕಿಲ್ ಅಟ್ ಸ್ಕೂಲ್ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದರು.

- Advertisement - 

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- Advertisement - 

 

Share This Article
error: Content is protected !!
";