ಫೆ.17ರಂದು ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ಅರಿವು ಕಾರ್ಯಾಗಾರ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಯುವಕ-ಯುವತಿಯರಿಗಾಗಿ
ಯುವನಿಧಿ ಪ್ಲಸ್ಯೋಜನೆಯಡಿ, ಫೆ.17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆಡಿಟೋರಿಯಮ್‌ನಲ್ಲಿ ವಿಶೇಷ ಕೌಶಲ್ಯ ತರಬೇತಿ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಭತ್ಯೆ ನೀಡುವುದಷ್ಟೇ ಅಲ್ಲದೆ, ಸೂಕ್ತ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾಕಾಂಕ್ಷಿಗಳನ್ನು ಸಬಲೀಕರಣಗೊಳಿಸುವುದು ಯುವನಿಧಿ ಪ್ಲಸ್ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಫಲಾನುಭವಿಗಳು ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಕೋರಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";