ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದಲ್ಲಿರುವ ಶ್ರೀವರಸಿದ್ಧಿ ವಿನಾಯಕನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿರುವುದು ಖಂಡನೀಯ ಎಂದು ಜೆಡಿಎಸ್ ಕಿಡಿಕಾರಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರು ಹಾಗೂ ಕಾನೂನಿನ ಭಯವಿಲ್ಲದೇ, ಪದೇ ಪದೇ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ದುಷ್ಟ ಕೆಲಸಗಳು ಹೆಚ್ಚುತ್ತಲೇ ಇದೆ.ಹಿಂದೂ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದುಷ್ಕೃತ್ಯಗಳನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಜೆಡಿಎಸ್ ಎಚ್ಚರಿಸಿದೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ ಗಣೇಶನ ವಿಗ್ರಹಕ್ಕೆ ಅಪಚಾರವೆಸಗಿ , ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಮತ್ತು ಭಕ್ತರ ನಂಬಿಕೆಗಳನ್ನು ಘಾಸಿಗೊಳಿಸಿರುವ ದುಷ್ಟರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸಿದೆ.

