ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ದ ಸ್ಲಂ ಜನಾಂದೋಲನ-ಕರ್ನಾಟಕ, ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಯ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರು ತತ್ತರಿಸುವಂತೆ ಮಾಡಿದ್ದಾರೆ. ಹಾಲು, ವಿದ್ಯುತ್, ಡೀಸೆಲ್ ಬೆಲೆ ಏರಿಸಿರುವುದಲ್ಲದೆ ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ, ಆಸ್ತಿ ಮೇಲಿನ ತೆರಿಗೆಗಳನ್ನು ಹೆಚ್ಚಿಸಿದೆ.
ಮೆಟ್ರೋ ದರ ಕೂಡ ಜಾಸ್ತಿಯಾಗಿದೆ. ಬಡವರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ಲಂ ಜನಾಂದೋಲನ-ಕರ್ನಾಟಕದ ಜಿಲ್ಲಾ ಸಂಚಾಲಕಿ ಡಿ.ಸುಧಾ ಒತ್ತಾಯಿಸಿದರು.
ಲೀಲಾವತಿ, ರತ್ನಮ್ಮ, ತೇಜೇಶ್ವರಿ, ಪಿ.ಉಮಾದೇವಿ, ಎಂ.ಮಂಜುಳ, ರೇಷ್ಮ ಜಿ. ವಸಂತಮ್ಮ, ಜಯಮ್ಮ, ಶಾಂತಮ್ಮ, ಮಂಜಮ್ಮ, ಶಾಂತಮ್ಮ, ಪಾಪಮ್ಮ, ಕವಿತ, ಶಿಲ್ಪ, ಗಂಗಮ್ಮ, ಸರಿತ ದೇವಮ್ಮ, ಶ್ರೀಲಕ್ಷ್ಮಿ, ಮಹೇಶ, ಹೊನ್ನೂರು ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.