ಜುಲೈ 12ರಂದು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಇದೇ ಜುಲೈ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ

- Advertisement - 

ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ  ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

- Advertisement - 

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವ ಡಿ.ಸುಧಾಕರ್ ಘನ ಉಪಸ್ಥಿತಿವಹಿಸುವರು. ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟನೆ ನೆರವೇರಿಸುವರು. ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ,

- Advertisement - 

ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೀಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ  ಪ್ರಾಧಿಕಾರ  ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಸೇರಿದಂತೆ ಅಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

Share This Article
error: Content is protected !!
";