ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ವಿಜಯನಗರ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜು.4 ರಂದು ಶುಕ್ರವಾರ, ಬೆಳಿಗ್ಗೆ 10.30ಕ್ಕೆ, ಹೋಟೆಲ್ ಮಲ್ಲಿಗೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ.ಈ. ಡೊಂಬರಮತ್ತೂರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ.ಎಸ್.ಲಾಡ್ ಉದ್ಘಾಟಿಸಲಿದ್ದಾರೆ. ವಸತಿ,
ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಮತ್ತು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಂಪ್ಲಿ ಶಾಸಕ ಜೆ.ಎನ್.ಗಣೇಶ ಘನ ಉಪಸ್ಥಿತಿ ವಹಿಸಲಿದ್ದಾರೆೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಸಂಸದ ಈ. ತುಕಾರಂ, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ್.ಎನ್.ಟಿ, ಹಡಗಲಿ ಶಾಸಕ ಎಲ್.ಕೃಷ್ಣನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ,
ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದ್ಯಸರಾದ ಡಾ.ಚಂದ್ರಶೇಖರ್.ಬಿ.ಪಾಟೀಲ್, ಶಶೀಲ್.ಜಿ.ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್.ಎನ್, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ ಸೇರಿದಂತೆ ನಗರ ಮತ್ತು ಗ್ರಾಮೀಣ ಸ್ಥಳಿಯ ಸಂಸ್ಥೆಗಳ ಸದ್ಯಸರುಗಳು ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು.ಬಿ.ಎಲ್, ಜಿ.ಪಂ ಸಿಇಓ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಷಾ,
ಕಾರ್ಮಿಕ ಇಲಾಖೆ ಜಂಟಿ ಆಯುಕ್ತ, ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ.ರವಿಕುಮಾರ, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಶಿಂದಿಹಟ್ಟಿ, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ.ಈ. ಡೊಂಬರಮತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

