ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಲಿತರ ಹೆಸರು ಹೇಳಿಕೊಂಡು ಬಲಿತಿರುವ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷದ ಮತ್ತೊಂದು ಬೃಹತ್ಹಗರಣ ಬಯಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ 120 ಕೋಟಿ ರೂ. ಮೌಲ್ಯದ ಟೆಂಡರ್ʼನಲ್ಲಿ 30 ಕೋಟಿ ರೂ. ಗೋಲ್ಮಾಲ್ಸಂಬಂಧ ಸಿಎಂ ಸಿದ್ದರಾಮಯ್ಯ ಕಚೇರಿ ಹಾಗೂ ಲೋಕಾಯುಕ್ತಕ್ಕೆ ದೂರು ತಲುಪಿದೆ ಎಂದು ಜೆಡಿಎಸ್ ತಿಳಿಸಿದೆ.

