ಸೈನಿಕರು, ರೈತರು, ವೈದ್ಯರು, ಶಿಕ್ಷಕರು ತಂದೆ ತಾಯಿಯಷ್ಟೇ ಸ್ಮರಣೀಯರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೈನಿಕರು
, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಗೌರವಿಸಿ ಮಾತನಾಡಿದರು.
ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ.
140 ಕೋಟಿ ಭಾರತೀಯರ ಜವಾಬ್ದಾರಿ.  

- Advertisement - 

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಇನ್ನುಮುಂದೆ ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ವಿಧಿಸುವುದನ್ನು ನಿಲ್ಲಿಸಲಾಗುವುದು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್
, ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೋಜನ್ ಥಾಮಸ್,

- Advertisement - 

ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ.ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಗಣೇಶ್ ಮದ್ದಪ್ಪ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ.ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಕ್ಯಾಪ್ಟನ್ ಎಂ.ವಿ.ಪಂಜಲ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಮೋಹನ್ ಗಂಗಾಧರನ್, ಮೇಜರ್ ಶಫೀಕ್ ಮೊಹಮದ್ ಖಾನ್, ಸೇನಾ ಪದಕ ಪುರಸ್ಕೃತ ಕರ್ನಲ್ ರಾಮಮೂರ್ತಿ ಅವರ ಕುಟುಂಬ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

 

Share This Article
error: Content is protected !!
";