ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ನಮ್ಮ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿರುವುದನ್ನು ಗಮನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದು ಸತ್ಯಕ್ಕೆ ದೂರವಾದುದ್ದು. ಆ ರೀತಿಯ ಯೋಚನೆಯಾಗಲೀ ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

