ಚಂದ್ರವಳ್ಳಿ ನ್ಯೂಸ್, ಮೈಸೂರು:
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾಗಬೇಕು ಎನ್ನುವ ಬಿಹಾರದ ನಾಯಕರ ಹೇಳಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಈ ಕುರಿತು ಪ್ರಶ್ನೆ ಕೇಳುತ್ತಿದ್ದಂತೆಯೇ ಸಿಟ್ಟಾದ ಅವರು, ಜನ ಅಥವಾ ಮಾಧ್ಯಮಗಳು ಈ ಬಗ್ಗೆ ಚರ್ಚಿಸುವುದು ಅನಗತ್ಯ. ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಬೇರೆಯವರು ಮಾತಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಮುಂದುವರೆದು ಮಾತನಾಡಿ ಸಿಎಂ ಸಿದ್ದರಾಮಯ್ಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಹಾರದಲ್ಲಿ ಬಡತನ ಹೆಚ್ಚಿದ್ದು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

