ಶೀಘ್ರ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಗ್ರಾಮೀಣ ಪ್ರಾಂತ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಕಾಲ ಸನಿಹವಾಗುತ್ತಿದೆ. ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಯ ಫಲಿತಾಂಶದಲ್ಲಿ ಆಡಳಿತ ಪಕ್ಷವಾದ ಕಾಂಗ್ರೆಸ್ ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡುವ ಧೈರ್ಯ ಬಂದಿದೆ ಎಂದು ರಾಜಕೀಯ ವಿಶ್ಲೇಷಕರ ಮಾತುಗಳಲ್ಲಿ ಕೇಳಿಬರುತ್ತಿವೆ.

 ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತ ವ್ಯವಸ್ಥೆಗೆ 2021 ರಿಂದ ಜನಪ್ರತಿನಿಧಿಗಳು ಇಲ್ಲದಿರುವುದು ಗ್ರಾಮೀಣ ಪ್ರಾಂತ್ಯದಲ್ಲಿನ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿರುವ ವಿಚಾರದಲ್ಲಿ ನಾನು ಕೆಲವು ದಿನಗಳ ಹಿಂದೆ ನನ್ನ ಬರವಣಿಗೆಯಲ್ಲಿ ವಿವರಿಸಿದ್ದೆ.

ಸ್ಥಳೀಯ ಸಂಸ್ಥೆಗಳ ಆಡಳಿತದ ವಿಚಾರದಲ್ಲಿ ನ್ಯಾಯಾಲಯ ಸರ್ಕಾರಕ್ಕೆ ಮನವರಿಕೆ ಮಾಡಿರುವಂತೆ ಮೀಸಲಾತಿಯ ಸೌಲಭ್ಯದ ಅನುಗುಣವಾಗಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಕ್ಕೆ ಬರುವಂತಹ ಜನವರಿ ಅಥವಾ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಉತ್ಸಾಹಕರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";