ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆಯು ನಡೆಸಿದ ಆಪರೇಷನ್ ಸಿಂಧೂರ ಜಂಟಿ ದಾಳಿಯ ವಿವರವನ್ನು ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದ್ದರು.
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆಯೂ ಹೌದು ಎನ್ನುವುದು ವಿಶೇಷ. ಸೋಫಿಯಾ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ತಾಜಾದ್ದೀನ್ ಬಾಗೇವಾಡಿ ಅವರನ್ನು ಮದುವೆಯಾಗಿದ್ದಾರೆ. ಇದೀಗ ಸೊಸೆಯ ಬಗ್ಗೆ ಮಾವ ಗೌಸ್ ಬಾಗೇವಾಡಿ ಮಾತನಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.