ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ-ಎಸ್ಪಿ ಬಂಡಾರು

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರಗಳಾದ  ಅಪರಾಧ ಪ್ರಕರಣಗಳು, ಸಿಬ್ಬಂದಿಗಳ ಆರೋಗ್ಯ ಹಾಗೂ ಕುಂದು ಕೊರತೆ ಬಗ್ಗೆ ಚರ್ಚಿಸಿದರು.

ಠಾಣೆಗೆ ಬರುವ ಸಾರ್ವಜನಿಕರು ಮತ್ತು ದೂರುದಾರರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಶಿಸ್ತಿನಿಂದ ಕರ್ತವ್ಯ ನಿರ್ವಹಿಸ ಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಕುಮಾರ್, ಸಿಪಿಐಗಳಾದ ಕಾಳಿ ಕೃಷ್ಣ, ಗುಡ್ಡಪ್ಪ, ಪಿಎಸ್ಐಗಳಾದ ಮಹೇಶ್ ಗೌಡ, ಅನುಸೂಯಮ್ಮ, ಜ್ಞಾನಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

 

 

 

- Advertisement -  - Advertisement -  - Advertisement - 
Share This Article
error: Content is protected !!
";