ಚಂದ್ರವಳ್ಳಿ ನ್ಯೂಸ್, ಹರಿಹರ:
ನಗರದ ಹೊರವಲಯದ ಹಳೆ ಹರ್ಲಾಪುರ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವತಿಯಿಂದ ಪೊಲೀಸ್ ಬೀಟ್ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದಕ್ಕಾಗಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉದ್ಘಾಟಿಸಿದರು.
ನಗರಸಭೆ ಉಪಾಧ್ಯಕ್ಷ ಎಂ.ಜಂಬಣ್ಣ, ಕಾಂಗ್ರೇಸ್ ಮುಖಂಡ ಹಾಲೇಶ್‌ಗೌಡ, ಹಳೇ ಹರ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಿಕಿ ರೀನಾ, ವೃತ್ತ ನಿರೀಕ್ಷಕ ಸುರೇಶ ಸಗರಿ, ಗ್ರಾಮಾಂತರ ಪೊಲೀಸ್‌ಠಾಣೆಯ ಪಿ.ಎಸ್.ಐಮಂಜುನಾಥ ಎಸ್‌ಕುಪ್ಪೇಲೂರು, ಮಹಾದೇವ ಸಿದ್ದಪ್ಪ ಭತ್ತೆರ, ಸೇರಿದಂತೆ ಅನೇಕ ಸಾರ್ವಜನಿಕರು ಇದ್ದರು.