ಎಂಎಸ್ಐಎಲ್ ಮೂಲಕ ವಿಶೇಷ ಚಿಟ್ ಫಂಡ್ ಯೋಜನೆ ಜಾರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂಎಸ್ಐಎಲ್ ಮೂಲಕ ವಿಶೇಷ ಚಿಟ್ ಫಂಡ್ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

- Advertisement - 

ಈ ವಿನೂತನ ಯೋಜನೆಯ ಪ್ರಾತ್ಯಕ್ಷಿಕೆ ಮತ್ತು ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಡೆಸಿ ಮಾತನಾಡಿದ ಸಚಿವರು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

- Advertisement - 

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೈಗಾರಿಕಾ ಇಲಾಖೆ ಮತ್ತು MSILನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು.

ಸರ್ಕಾರದ ಬೆಂಬಲವಿರುವ #MSILChitfund ಸಂಪೂರ್ಣವಾಗಿ ಸುರಕ್ಷಿತ ಹಾಗೂ ವಿಶ್ವಾಸಾರ್ಹವಾಗಿದ್ದು, ಉಳಿತಾಯಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಂಕಷ್ಟದ ಸಮಯದಲ್ಲಿ ಆರ್ಥಿಕ ಬಲವನ್ನೂ ಒದಗಿಸಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

- Advertisement - 

 

Share This Article
error: Content is protected !!
";