ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ರವರ ಜನ ಸೇನಾ ಪಕ್ಷದ ವತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿಯನ್ನು ಬೆಳ್ಳಿರಥದಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜಾ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಬತುಲ ಬಲರಾಮ ಕೃಷ್ಣ, ಈಸ್ಟ್ ಗೋದಾವರಿ ಜಿಲ್ಲೆ ಇವರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ದೇವಾಲಯ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ ಪ್ರಧಾನ ಅರ್ಚಕರು ಶ್ರೀನಿಧಿ ದೇವಾಲಯದ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.