ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವೈಕುಂಠ ಏಕಾದಶಿ ಪ್ರಯುಕ್ತ ನಗರದ ಪ್ರಸಿದ್ದ ದೇವಾಲಯವಾದ ತೇರಿನಬೀದಿಯ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆದು ಧನ್ಯರಾದರು.
ತೂಬಗೆರೆಯ ಇತಿಹಾಸ ಪ್ರಸಿದ್ದ ವೆಂಕಟರಮಣ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕೈಂಕರ್ಯಗಳು ನೆರವೇರಿತು. ಶತಮಾನಗಳ ಹಿನ್ನೆಲೆಗಳಿರುವ ವಡ್ಡರಹಳ್ಳಿಯ ವೆಂಕಟರಮಣ ಸ್ವಾಮಿ ದೇವಾಲಯದಲ್ಲು ವಿಶೇಷ ಅಲಂಕಾರ ಪೂಜಾಕಾರ್ಯಗಳು ನಡೆಯಿತು ಭಕ್ತರು ಸ್ವಾಮಿಯ ದರ್ಶನ ಪಡೆದು ಪುನೀತರಾದರು.