ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋನಿಗರಹಳ್ಳಿ ಮತ್ತು ದೊಡ್ಡಬೀರನಹಳ್ಳಿ ಈ ಹಿಂದೆ ನಡೆದ ಸವರ್ಣಿಯರ ದೌರ್ಜನ್ಯದಲ್ಲಿ ಹಾನಿಗೆಗೊಳಗಾದ ಅಲ್ಲಿನ ದಲಿತ ಕುಟುಂಬಗಳು ಹಾಗೂ ಅವರ ಆಶ್ರಿತ ಕುಟುಂಬಗಳಿಗೆ ಸರ್ಕಾರದಿಂದ ಸೌಲಭ್ಯ ಹಾಗೂ ಹೆಚ್ಚಿನ ಅನುದಾನ ನೀಡಿ
ದಲಿತರ ಕಲ್ಯಾಣಕ್ಕಾಗಿ ತಾಲ್ಲೂಕು ಆಡಳಿತ ಸ್ಪಂದಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಧರಣಿನಿರತ ಶೋಷಿತ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿ ಸಂದರ್ಭದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು, ಸಮಸ್ಯೆಗಳ ಬಗ್ಗೆ ಆಲಿಸಿ ಮನವಿಯನ್ನು ಪಡೆದರು.
ಇದೇ ಸಂದರ್ಭದಲ್ಲಿ ತಹಶೀಲ್ಧಾರ್ ರೇಹಾನ್ಪಾಷ ಹಾಗೂ ಉಪವಿಭಾಗಾಧಿಕಾರಿ ಮೊಹಬೂಬ್ಜಿಲಾನಿಯವರೊಂದಿಗೆ ಚರ್ಚೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ
ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ನಿಮ್ಮ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಈ ಹಿಂದೆಯೂ ಸಹ ಜಿಲ್ಲಾಡಳಿತ ದೌರ್ಜನ್ಯಕ್ಕೀಡಾದ ದಲಿತ ಕುಟುಂಬಗಳಿಗೆ ಕೆಲವೊಂದು ಸೌಲಭ್ಯ ನೀಡಿದ ಬಗ್ಗೆ ಪ್ರಸ್ತಾಪಿಸಿದ ಶಾಸಕರು ಈ ಬಗ್ಗೆ ಪ್ರತ್ಯೇಕವಾಗಿವಾಗಿಯೇ ಸರ್ಕಾರದೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.
ಧರಣಿ ನಿರತದಲಿತ ಮುಖಂಡ ಶಾಸಕರೊಂದಿಗೆ ಮಾತನಾಡಿ, ಘಟನೆ ನಡೆದು 10 ವರ್ಷಗಳೇ ಕಳೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ, ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳ ಸಮಸ್ಯೆಗಳನ್ನು ಆಲಿಸುವವರುಯಾರೂ ಇಲ್ಲ. ಒಟ್ಟಿನಲ್ಲಿ ಆ ಭಾಗದ ದಲಿತ ಕುಟುಂಬಗಳು ಸದಾಕಾಲ ನೋವಿನಿಂದಲೇ ಬದುಕುವ ಸ್ಥಿತಿಉಂಟಾಗಿದೆ ಎಂದು ನೊಂದು ನುಡಿದರು.
ಈ ಸಂದರ್ಭದಲ್ಲಿ ತಹಶೀಲ್ಧಾರ್ ರೇಹಾನ್ ಪಾಷಾ, ಇಒ ಎಸ್.ಶಶಿಧರ, ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳೀಧರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ, ರಮೇಶಗೌಡ, ಜಿ.ಟಿ.ಶಶಿಧರ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಎ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೇವ್ಲಾನಾಯ್ಕ್, ನಾಮ ನಿರ್ದೇಶನ ಸದಸ್ಯರಾದ ವೀರಭದ್ರ, ಬಡಗಿ ಪಾಪಣ್ಣ, ಸೈಯದ್ ಮುಂತಾದವರು ಉಪಸ್ಥಿತರಿದ್ದರು.

