ಸೆಪ್ಟೆಂಬರ್ 11 ರಂದು ವಿಶೇಷ ಜಂಟಿ ಸದನ ಸಮಿತಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ 2020-21 ನೇ ಸಾಲಿನಲ್ಲಿ ಹೊಸದಾಗಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸ್‍ಸ್ ಕಾಲೇಜುಗಳಿಗೆ ಮೂಲ ಸೌಕರ್ಯಗಳಿಲ್ಲದಿದ್ದರೂ ಅನುಮತಿ ನೀಡಿ ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಅವರು ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕುರಿತು ಪರಿಶೀಲಿಸಲು ಎನ್. ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ

- Advertisement - 

ರಚಿಸಲಾಗಿರುವ ವಿಶೇಷ ಜಂಟಿ ಸದನ ಸಮಿತಿಯು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಗೆ ಶಾಸಕರ ಭವನ ಕಟ್ಟಡ – 5 ರ ಮೂರನೇ ಮಹಡಿಯಲ್ಲಿರುವ ಸಮ್ಮೇಳನಾ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ತಿನ ಉಪ ಕಾರ್ಯದರ್ಶಿ  ಹೆಚ್. ಮಲ್ಲೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";