ಪತ್ರಕರ್ತರಿಗಾಗಿ ಮಾನನಷ್ಟ ಮೊಕದ್ದಮೆ ಹಾಗೂ ನ್ಯಾಯಾಂಗ ನಿಂದನೆ ಕುರಿತು ವಿಶೇಷ ಉಪನ್ಯಾಸ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನವೆಂಬರ್-9 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

- Advertisement - 

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸುವರು.

- Advertisement - 

ಹಿರಿಯ ವಕೀಲರಾದ ಎಂ.ವಿ.ರೇವಣಸಿದ್ದಯ್ಯರವರು “ಮಾನನಷ್ಟ ಮೊಕದ್ದಮೆ ಹಾಗೂ ನ್ಯಾಯಾಂಗ ನಿಂದನೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

 ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಎಂ.ಎನ್. ಅಹೋಬಳಪತಿ
, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು.

- Advertisement - 

ಪತ್ರಿಕೋದ್ಯಮಿಗಳು, ಹಿರಿಯ, ಕಿರಿಯ ಪತ್ರಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ವಿಶೇಷ ಉಪನ್ಯಾಸದ ಮಾಹಿತಿ ತಿಳಿದುಕೊಳ್ಳಲು ಸಂಘಟಕರು ಮನವಿ ಮಾಡಿದ್ದಾರೆ.

Share This Article
error: Content is protected !!
";