ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೇದೆಹಳ್ಳಿ ರಸ್ತೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26ನೇ ವರ್ಷದ ಅನ್ನದಾನದ ಕಾರ್ಯಕ್ರಮದ ಉದ್ಘಾಟನೆ ನವೆಂಬರ್-16 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಗಣ ಹೋಮ, ನವ ಗ್ರಹ ಹೋಮ ,ರುದ್ರ ಹೋಮ ಮಧ್ಯಾಹ್ನ 12:30 ಗಂಟೆಗೆ ಪೂರ್ಣಾವತಿ ಕಾರ್ಯಕ್ರಮ ಇರುತ್ತದೆ.
ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಮುಖಂಡ ಉಮೇಶ್ ಗೋವಿಂದ ಕಾರಜೋಳ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರತಿ ವರ್ಷದಂತೆ ಮಾಲೆ ಧರಿಸಿದ ಅಯ್ಯಪ್ಪ ಸ್ವಾಮಿಗಳಿಗೆ ದಿನಾಂಕ 16 -11 -2025 ರಿಂದ 13 -1- 2026 ವರೆಗೆ 60 ದಿನಗಳ ಕಾಲ ಪ್ರತಿನಿತ್ಯ ಉಚಿತ ಅನ್ನದಾನ ಕಾರ್ಯಕ್ರಮ ನೆರವೇರಿಸಲಾಗುವುದು.
16-12-2025 ರಿಂದ 21-12-2025 ರವರೆಗೆ 26ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ ಇರುತ್ತದೆ. ದಿನಾಂಕ-20-12- 2025 ಶನಿವಾರ ಸಂಜೆ 7ಗೆ ಅಯ್ಯಪ್ಪ ಸ್ವಾಮಿ ಪಡಿಪೂಜೆ, ದಿನಾಂಕ-28- 12- 2025 ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಅನ್ನದಾನ ಕಾರ್ಯಕ್ರಮ, 13-01-2026 ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಆಭರಣ ಮೆರವಣಿಗೆ, 14 -1-2026 ಬುಧವಾರ ಸಂಜೆ 6 ಗಂಟೆಗೆ ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಇರುತ್ತದೆ.
ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಸೇವಾರ್ತಿಗಳು ಹಾಗೂ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಬೆಟ್ಟದ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು 9448664865 ಕಾರ್ಯದರ್ಶಿ 9342310469 ಸಂಪರ್ಕಿಸಬಹುದಾಗಿದೆ.

