ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವೈಕುಂಠ ಏಕಾದಶಿ ಪ್ರಯುಕ್ತ ವಡ್ಡರಹಳ್ಳಿ ಕಲ್ಯಾಣ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಹಣ್ಣು ಹಾಗೂ ಪುಷ್ಪಗಳಿಂದ ಮಾಡಿದ ಅಲಂಕಾರ ಭಕ್ತರನ್ನು ಸಂಪ್ರೀತರನ್ನಾಗಿ ಮಾಡಿತ್ತು.

 ಸೂರ್ಯೋದಯಕ್ಕೆ ಮುಂಚೆಯೇ ಭಕ್ತಾದಿಗಳು ದೇವರ ದರ್ಶನ ಪಡೆದು ಪುನೀತರಾದರು. ದೇವಾಲಯದ ಆಡಳಿತ ಮಂಡಲಿ, ಗ್ರಾಮದ ಜನತೆಯ ಸಹಕಾರದಿಂದ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಪ್ರಸಾದವಿನಿಯೋಗ ಹಾಗೂ ಸಕಲ ವ್ಯವಸ್ಥೆ ಅಚ್ಚುಕಟ್ಟಾಗಿತ್ತು.

- Advertisement - 

ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್. ಮುನಿಯಪ್ಪನವರು ಹಾಗೂ ಯಲಹಂಕ ಕ್ಷೇತ್ರದ ಶಾಸಕರಾದ ಎಸ್. ಆರ್. ವಿಶ್ವನಾಥ್ ಹಾಗೂ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ರವರು ಸ್ವಾಮಿಯ ದರ್ಶನ ಪಡೆದರು.

- Advertisement - 

 

 

 

 

Share This Article
error: Content is protected !!
";