ಸೆ.13 ರಂದು ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಕ್ಟೋಬರ್ 01 ರಂದು ಜರಗುವ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಸೆ.13 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

 60 ರಿಂದ 69 ಹಾಗೂ 70 ವರ್ಷ ಮೇಲ್ಪಟ್ಟವರು ಎಂಬ ಎರಡು ಗುಂಪುಗಳಲ್ಲಿ ಸ್ಪರ್ಧೆಗಳು ಜರುಗಲಿವೆ. ಕ್ರೀಡಾ ವಿಭಾಗದಲ್ಲಿ ಮ್ಯೂಜಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆಗಳಿವೆ. ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆಗಳಿವೆ. ಬೆಳಿಗ್ಗೆ 9.30 ರಿಂದಲೇ ಹೆಸರುಗಳನ್ನು ನೊಂದಾಯಿಸಿಕೊಳ್ಳಲಾಗವುದು.

 ಹೆಚ್ಚಿನ ಮಾಹಿತಿಗಾಗಿ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದ ಬಳಿಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-235284ಗೆ ಕರೆ ಮಾಡಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";