ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಟ್ಟಾಗ ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಸಾಧ್ಯ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಹೇಳಿದರು.
ಚಿತ್ರದುರ್ಗ ಸ್ಟೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ೨೫ ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ-೨೦೨೫ ಪ್ರೀಮಿಯರ್ ಲೀಗ್ ಸೀಸನ್-೪ ಫೈನಲ್ ಪಂದ್ಯ ವೀಕ್ಷಿಸಿ ಮಾತನಾಡಿದರು.
ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಬಡ್ಡಿ ಪಂದ್ಯಾವಳಿಗೆ ಮೊದಲಿನಿಂದಲೂ ಸಹಕಾರ ನೀಡುತ್ತಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆದಿತ್ತು. ಮುರುಗೇಶ್ ಮತ್ತವರ ತಂಡದವರು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಅತ್ಯಂತ ಖುಷಿಯ ಸಂಗತಿ.
ಒಂದು ಕಾಲದಲ್ಲಿ ಚಿತ್ರದುರ್ಗ ಕುಸ್ತಿಗೆ ಹೆಸರುವಾಸಿಯಾಗಿತ್ತು. ಈಗ ಕಬಡ್ಡಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಕೇವಲ ಕ್ರಿಕೇಟಿಗಷ್ಟೆ ಆದ್ಯತೆ ನೀಡುವ ಬದಲು ಕಬಡ್ಡಿ ಪಟುಗಳಿಗೆ ಬೆಂಬಲ ಸಿಕ್ಕಾಗ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ಸಹಾಯವಾಗಲಿದೆ ಎಂದರು.
ಮಡಿವಾಳ ಜನಾಂಗದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ, ಕಬಡ್ಡಿ ಪ್ರಾಂಚೆಸಿಗಳಾದ ಚಂದ್ರಶೇಖರ್, ದೇವರಾಜ್
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‌ನಾಯ್ಕ, ವಕೀಲರುಗಳಾದ ಓ.ಪ್ರತಾಪ್‌ಜೋಗಿ, ಪ್ರಕಾಶ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.