ನ.25ರಂದು ವಿಕಲಚೇತನರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 03ರಂದು ಆಚರಿಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕ
øತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕ್ರೀಡಾ ಸ್ಪರ್ಧೆಗಳ ವಿವರ: 18 ವರ್ಷ ಮೇಲ್ಪಟ್ಟ ದೃಷ್ಟಿದೋಷವುಳ್ಳವರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆ ನಡೆಯಲಿದೆ.  ಶ್ರವಣ ದೋಷವುಳ್ಳವರಿಗೆ ಹಾಗೂ ದೈಹಿಕ ವಿಕಲಚೇತನರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ ನಡೆಯಲಿದೆ. ಬೌದ್ಧಿಕ ವಿಕಲಚೇತನರಿಗೆ 100ಮೀ ಓಟಬಕೆಟ್‍ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.

- Advertisement - 

ಸಾಂಸ್ಕøತಿಕ ಸ್ಪರ್ಧೆಗಳ ವಿವರ: 18 ವರ್ಷ ಮೇಲ್ಪಟ್ಟ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬೌದ್ಧಿಕ ವಿಕಲತೆ ಹೊಂದಿರುವವರಿಗೆ ಜಾನಪದ ಗೀತೆ, ಭಾವಗೀತೆ ಭಕ್ತಿಗೀತೆಯನ್ನು ಏರ್ಪಡಿಸಲಾಗಿದೆ.

ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";