ಒತ್ತಡದ ಬದುಕಿಗೆ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹೊಸಪೇಟೆ:
ಕ್ರೀಡೆ ಆರೋಗ್ಯ ಕಾಪಾಡುವ ಸಾಧನವಾಗಿದ್ದು, ದೈನಂದಿನ ಒತ್ತಡದ ಬದುಕಿಗೆ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಕಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳಿಗೆ ಸೋಮವಾರ ಏರ್ಪಡಿಸಿದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೈನಂದಿನ ಕೆಲಸದ ಒತ್ತಡದಲ್ಲಿ ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ. ಆರೋಗ್ಯವಂತ ದೇಹದಲ್ಲಿ ಆರೋಗ್ಯಯುತವಾದ ಮನಸ್ಸು ನೆಲೆಸಿರುತ್ತದೆ ಎಂಬ ನಾಣ್ಣುಡಿಯಂತೆ ಸಿಬ್ಬಂದಿ ಸಹ ಸದೃಢವಾಗಿದ್ದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಕ್ರೀಡೆಯೆಂಬುವುದು ಸ್ಪೂರ್ತಿ, ಶಿಸ್ತು ಮತ್ತು ಆರೋಗ್ಯಕರ ಸ್ಪರ್ಧೆಯನ್ನು ತೋರಿಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದರು.

- Advertisement - 

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಿನನಿತ್ಯ ಕೆಲಸದ ಒತ್ತಡದಲ್ಲಿ ದೈಹಿಕವಾಗಿ ಕುಗ್ಗಿರುತ್ತಾರೆ. ಕೆಲಸದ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ ಕ್ರೀಡೆ ಸಹಕಾರಿಯಾಗುವುದಲ್ಲದೇ ಪರಸ್ಪರ ಭಾಂದವ್ಯ ವೃದ್ದಿಸುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೃಹತ್ ಮಟ್ಟದಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಚಾಲನೆ ನೀಡಿದರು.

- Advertisement - 

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಮುಖ್ಯ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಲೆಕ್ಕಾಧಿಕಾರಿ ರುದ್ರಪ್ಪ ಅಕ್ಕಿ, ತಾಲ್ಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಆಲಂ ಬಾಷಾ ಸೇರಿದಂತೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಪಿ.ಆರ್.ಇ.ಡಿ, ಕೆ.ಆರ್.ಐ.ಡಿ.ಎಲ್ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

 

Share This Article
error: Content is protected !!
";