ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸುf-ಸಚಿವ ಸುಧಾಕರ್
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸುವ ಮನೋಭಾವನೆಗಳನ್ನು ಬೆಳೆಸಿ ಕೊಳ್ಳಬೇಕೆಂದು ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಶ್ರೀ ವಾಗ್ದೇವಿ ವಿದ್ಯಾ ಸಂಸ್ಥೆ ಆವರಣದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸ್ಟಾರ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್, ಚಿತ್ರದುರ್ಗ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬಾಲಕ/ ಬಾಲಕಿಯರ ಸಬ್ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಸೋಲು ಗೆಲುವುಗಳ ಲೆಕ್ಕಚಾರ ಮಾಡದೇ ಉತ್ತಮ ಆರೋಗ್ಯಕ್ಕಾಗಿ ವಯೋಮಿತಿ ಇಲ್ಲದೆ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯ ಎಂದು ಸಚಿವರು ತಿಳಿಸಿದರು.
ರಾಜ್ಯ ಆರ್ಯ ವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ವಿ.ಅಮರೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ಪರ್ಧೆಗಳು ಸೌಹಾರ್ದತೆವಾಗಿರಬೇಕು, ಕ್ರೀಡೆಗಳಲ್ಲಿ ಸೋತಾಗಿ ಕುಗ್ಗುವುದು, ಗೆದ್ದಾಗ ಹಿಗ್ಗುವುದು ಬೇಡ, ತಾವು ಪಾಲ್ಗೊಳ್ಳುವ ಕ್ರೀಡೆಗಳು ಸಂತೋಷವನ್ನು ಉಂಟು ಮಾಡುವಂತ ಹಿತಕರವಾಗಿಬೇಕೆಂದು ಹೇಳಿದರು.
ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಆರ್.ನಾಗೇಂದ್ರ ನಾಯ್ಕ್, ನಗರಸಭೆ ಸದಸ್ಯೆ ಮಮತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಜೆ ಖಾದಿ, ವಾಸವಿ ಯುವಜನ ಸಂಘದ ಅಧ್ಯಕ್ಷ ಜಗದೀಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರವೀಂದ್ರ ನಾಯ್ಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ಗೌರವಾಧ್ಯಕ್ಷ ಶಿವಶಂಕರ್ ಮಠದ್, ಜಿಲ್ಲಾ ಸಂಸ್ಥೆ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಶ್ರೀ ರಾಮ ನಾಯಕ, ಅನಿಲ್, ತಾಲ್ಲೂಕು ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಣ್ಣ, ಪರಮೇಶ್, ಶ್ರೀನಿವಾಸ್.ಡಿ.ಜಿ, ಶ್ರೀನಿವಾಸ, ಗೋಪಾಲ್, ಸಪ್ತ ಸಾಗರ್ ಮುಂತಾದವರು ಉಪಸ್ಥಿತರಿದ್ದರು.