ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪೌರ್ಣಮಿ ದಿವಸ ಮಂಗಳವಾರ ಬೆಳಿಗ್ಗೆ 05 ಗಂಟೆಗೆ ವಿಶೇಷ ಅಭಿಷೇಕ ಮಾಡಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.
ದೇವರ ದರ್ಶನಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯದರ್ಶಿ ಪಿ.ದಿನೇಶ್‍ರವರು ಪ್ರಧಾನ ಅರ್ಚಕ ಶ್ರೀನಿಧಿ,
ದೇವಾಲಯದ ನಂಜಪ್ಪ, ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು. ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

