ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇರುವ ಗ್ರಾಮ ದೇವತೆ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿಗೆ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಬೆಳಗ್ಗೆ ಅಭಿಷೇಕ ನಂತರ ಮಹಾಮಂಗಳಾರತಿ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯದ ಮುಖ್ಯಸ್ಥರಾದ ಶ್ರೀ ಸುಬ್ರಹ್ಮಣ್ಯ ನಾಯಕ್ ಹಾಗೂ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಪಂಚಾಯಿತಿ ಸದಸ್ಯರಾದ ಪುರುಷೋತ್ತಮ್ ಮತ್ತು ಗ್ರಾಮದ ಮುಖಂಡರು ಭಾಗವಹಿಸಿದ್ದರು.