ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಮೆದಿಹಳ್ಳಿ ರಸ್ತೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಪೂಜಾ ಕಾರ್ಯಕ್ರಮದ ಪ್ರಯುಕ್ತ ಭೀಮಾಂಜನೇಯ ಸ್ವಾಮಿ ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಲಂಕಾರ ಹಾಗೂ ಪಾನಕ ಕೋಸಂಬರಿ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದ್ದರು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

