ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದೊಂದು ವಾರದಿಂದ ಎಸ್ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಸೋರಿಕೆ ಮಾಡಲಾಗಿತ್ತು. ಇದೀಗ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ.

ಸರ್ಕಾರ, ಶಿಕ್ಷಣ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆಯೇ? ಇಂದು ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ನಾಳೆ ಎಸ್ಎಸ್ಎಲ್‌ಸಿ – ಪಿಯುಸಿ ಅಂತಿಮ ಪರೀಕ್ಷಾ ಪತ್ರಿಕೆಗಳನ್ನು ಬಯಲು ಮಾಡುವುದಿಲ್ಲ ಎನ್ನುವುದಕ್ಕೇನು ಖಾತರಿ? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

ವಿದ್ಯಾರ್ಥಿಗಳು ವರ್ಷ ಪೂರ್ತಿ ಶ್ರದ್ಧೆಯಿಂದ ಓದಿ, ಪರೀಕ್ಷೆ ಬರೆಯಲು ಸಜ್ಜಾಗಿ ಬಂದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ಮುಂದೂಡಿದರೆ ಆ ಎಳೆಯ ಮನಸ್ಸುಗಳಿಗೆ ಆಗುವ ಆಘಾತ ಎಂತದ್ದು? ಕುರ್ಚಿ ಕನಸಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದು ಅರ್ಥವಾಗುವುದಾದರೂ ಹೇಗೆ?

ಇಷ್ಟು ಬಹಿರಂಗವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಭಯ ಇಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿದೆ ಎಂದರೆ, ಅಧಿಕಾರಿಗಳು ನಿದ್ರೆಯಲ್ಲಿದ್ದಾರೇನು? ಇಂತಹ ಅಸಮರ್ಥ ಸರ್ಕಾರಕ್ಕೆ ನಮ್ಮ ಧಿಕ್ಕಾರ. ವಿದ್ಯಾರ್ಥಿಗಳು ಮತ್ತೆ ಪರೀಕ್ಷಾ ಮುಂದೂಡಿಕೆಯಂತಹ ಸಮಸ್ಯೆಯ ಸುಳಿಯಲ್ಲಿ ಸಿಲುಕಿದರೆ, ಸರ್ಕಾರವನ್ನು ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಸಿ.ಟಿ ರವಿ ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";