ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡುತ್ತಿದ್ದಾರೆ. ಮಧ್ಯಾಹ್ನ 12.30ರ ಬಳಿಕ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 12.30ಕ್ಕೆ ಇಲಾಖೆ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷ ತರಗತಿ, ತೆರವಾಗಿರುವ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗಿತ್ತು. ಈ ಬಾರಿಯ ಫಲಿತಾಂಶದಲ್ಲಿ ಶೇ.8ರಷ್ಟು ಸುಧಾರಣೆಯಾಗಿದೆ‌. ಕಳೆದ ಬಾರಿ ಶೇ.53ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.66ರಷ್ಟು ಬಂದಿದೆ ಎಂದು ತಿಳಿಸಿದರು.

ದಕ್ಷಿಣ‌ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಅಗ್ರಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆಯು ಕೊನೆ ಸ್ಥಾನದಲ್ಲಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು, ರಾಜ್ಯಕ್ಕೆ ಟಾಪರ್​ ಆಗಿ ಹೊಹೊಮ್ಮಿದ್ದಾರೆ.
65 ವಿದ್ಯಾರ್ಥಿಗಳಿಗೆ 624 ಅಂಕಗಳು ಬಂದಿವೆ. 921 ಪ್ರೌಢಶಾಲೆಗಳು ಶೇ. 100ರಷ್ಟು ಫಲಿತಾಂಶ ಸಾಧಿಸಿವೆ. 144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 

Share This Article
error: Content is protected !!
";