ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ದುಷ್ಕರ್ಮಿಗಳು ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಬಿಜೆಪಿ ನಾಯಕರು ಕೊಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಕ್ರಿಕೆಟ್ ಆಟದಲ್ಲಿ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಸಂಬಂಧ 7 ಮಂದಿ ಅಪ್ರಾಪ್ತರನ್ನು ಈಗಾಗಲೇ ಬಂಧಿಸಲಾಗಿದೆ. ಗಿರೀಶ್ ಜೊತೆ ಆರೋಪಿಗಳು ಕ್ರಿಕೆಟ್ ಆಟವಾಡಿದ್ದ ಹಿನ್ನೆಲೆಯಲ್ಲಿ ಗಲಾಟೆ ಮಾಡುತ್ತಿದ್ದರು.
ಈ ವೇಳೆ ಸಂಕೇತ್ ಗಲಾಟೆ ಬಿಡಿಸಲು ತೆರಳಿದ್ದ. ಆ ವೇಳೆ ಸಂಕೇತ್ ಕೊಲೆ ಆಗಿದೆ. ಕೈಯಲ್ಲಿ ಗುದ್ದಿ ಹಲ್ಲೆ ಮಾಡಿರುವ ಹಿನ್ನೆಲೆಯಲ್ಲಿ ಸಾವಾಗಿದೆ. ಕಳೆದೆರೆಡು ದಿನಗಳ ಹಿಂದೆಯಷ್ಟೇ ಕ್ರಿಕೆಟ್ ಆಟ ಆಡಿದ್ದರು. ಈ ಹಿನ್ನೆಲೆಯಲ್ಲಿ ಗಲಾಟೆ ನಡೆದು ಕೊಲೆ ನಡೆದಿದೆ. ಕೊಲೆ ಮಾಡಿರುವ ಅಪ್ರಾಪ್ತ ಬಾಲಕರ ಗಾಂಜಾ ಸೇವನೆ ಬಗ್ಗೆ ಪರೀಕ್ಷೆ ನಡೆಸಲಾಗುವುದು.
ಊರುಗಡೂರಿನಲ್ಲಿ ವಿಶೇಷ ಬೀಟ್ ವ್ಯವಸ್ಥೆ ಮಾಡಲಾಗುವುದು. ಔಟ್ ಪೊಸ್ಟ್ ತೆರೆಯಲು ಕೂಡ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

