ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025ರ ಎಸ್ಎಸ್ಎಲ್ಸಿ ಪರೀಕ್ಷೆ–01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ–02 ನ್ನು ಇದೇ ಮೇ.26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತಿದೆ.
ಪ್ರಪ್ರಥಮ ಬಾರಿಗೆ ಪರೀಕ್ಷೆ ನೊಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅಂತಿಮ ಮೇ.10 ಕೊನೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅನುತ್ತೀರ್ಣಗೊಂಡಿರುವ 13,579 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳುವುದು.
ಶೇ.75 ಹಾಜರಾತಿ ಕೊರತೆಯಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ –01 ರಿಂದ ಹೊರಗುಳಿದ 15 ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ–02ಕ್ಕೆ ನೊಂದಾಯಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಈ ಮೇಲಿನಂತೆ ಇಲಾಖೆಯು ಅವಕಾಶ ಕಲ್ಪಿಸಿರುವುದರಿಂದ ಜಿಲ್ಲೆಯಲ್ಲಿನ ಎಲ್ಲಾ ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳನ್ನು ಪರೀಕ್ಷೆ–02ಕ್ಕೆ ನೋಂದಾಯಿಸಿ ಪರೀಕ್ಷೆ ಬರೆಸಲು ಕ್ರಮವಹಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.