ಗ್ರಂಥಾಲಯದ ಮುಂದೆ ಸಾಲಿನಲ್ಲಿ ನಿಂತಾಗ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಪ್ರತಿಷ್ಠಿತ ಲಾವಣ್ಯ ಶಿಕ್ಷಣ ಮಹಾವಿದ್ಯಾಲಯದಲ್ಲಿ “ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ”ಯನ್ನು ಗ್ರಂಥಾಲಯ ಪಿತಾಮಹ ರಂಗನಾಥನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ ರವರು ನಮ್ಮ ಸಂಸ್ಥೆಯಲ್ಲಿ ಸುಮಾರು ಐದು ಸಾವಿರ ಪುಸ್ತಕಗಳ ಸಂಗ್ರಹ ಇದ್ದು ಪ್ರತಿವರ್ಷವೂ ಸಾವಿರಾರು ಪುಸ್ತಕಗಳನ್ನು ಖರೀದಿಸಲಾಗುತ್ತದೆ ಇದರಿಂದ ಬಿಎಡ್ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿದೆ ಎಂದು ಹೇಳಿದರು.

- Advertisement - 

ಬಿಎಡ್ ಕಾಲೇಜು ಪ್ರಾಂಶುಪಾಲ ಪ್ರೊ ಜಿ ಕೃಷ್ಣಮೂರ್ತಿ ಮಾತನಾಡಿ ಗ್ರಂಥಾಲಯ ದಿನಾಚರಣೆಯಿಂದ ಅದರ ಮಹತ್ವವನ್ನು ತಿಳಿಸಲು ಅನುಕೂಲಕರವಾಗಿದೆ ಎಂದು ಹೇಳಿದರು ಜೊತೆಗೆ ಪ್ರತಿವರ್ಷ ಆಗಸ್ಟ್ ತಿಂಗಳ 12 ರಂದು ಗ್ರಂಥಾಲಯ ದಿನಾಚರಣೆ ಯನ್ನು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಪದವಿ ಮತ್ತು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ ಡಾ: ಅಂಬೇಡ್ಕರ್ ಹೇಳಿದಂತೆ ನಮ್ಮ ದೇಶದ ಜನರು ದೇವಸ್ಥಾನದ ಬಳಿ ಹೇಗೆ ಸಾಲಿನಲ್ಲಿ ನಿಂತಿರುತ್ತಾರೋ ಹಾಗೆ ಗ್ರಂಥಾಲಯದ ಮುಂದೆ ಸಾಲಿನಲ್ಲಿ ನಿಂತಾಗ ನಮ್ಮ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ ಎಂದು ಹೇಳಿದರು

- Advertisement - 

ಹಾಗೆಯೇ ದೇವನೂರು ಮಹಾದೇವ ಅವರು ಹೇಳಿದಂತೆ “ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ”ಹೇಗೆ ಪಲಕೊಡುತ್ತದೆಯೊ ಹಾಗೆ ಗ್ರಂಥಾಲಯ ದೇವಾಲಯ ಇದ್ದಂತೆ ಎಂದು ಹೇಳಿದರು ಈ ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಜಿ ಸತೀಶ್ ಉಪನ್ಯಾಸಕರಾದ ಪ್ರಕಾಶ್ ಲತಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಅರುಣ್ ಯತೀಂದ್ರ ಹಾಗೂ ಬಿಎಡ್ ವಿದ್ಯಾರ್ಥಿಗಳು ಹಾಜರಿದ್ದರು.

 

 

Share This Article
error: Content is protected !!
";